ದಲಿತ ಮಹಿಳೆಯ ಅತ್ಯಾಚಾರ, ವಂಚನೆ ಆರೋಪ: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ
Update: 2023-01-09 13:51 IST
ಮೈಸೂರು: ದಲಿತ ಮಹಿಳೆ ಮೇಲೆ ಅತ್ಯಾಚಾರ ವಂಚನೆ ಆರೋಪ ಪ್ರಕರಣ ಸಂಬಂಧ ಸ್ಯಾಂಟ್ರೋ ರವಿ ಆಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳೆಗೆ ಮತ್ತು ಬರುವ ಔಷಧಿ ಬೆರಸಿದ್ದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಆಪ್ತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಸ್ಯಾಂಟ್ರೋ ರವಿಗೆ ಮದುವೆ ಮಾಡಿಸಿದ್ದ ಪುರೋಹಿತರನ್ನು ವಿಶೇಷ ಪೊಲೀಸರ ತಂಡ ವಿಚಾರಣೆಗೆ ಒಳಪಡಿಸಿದೆ.
ಸ್ಯಾಂಟ್ರೊ ರವಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮೈಸೂರು ವಿಶೇಷ ಪೊಲೀಸರ ತಂಡ ಶೋಧ ನಡೆಸುತ್ತಿದೆ.
ಮತ್ತೊಂದೆಡೆ ಅನ್ಯಾಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಪತ್ನಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ 164 ರಡಿ ಹೇಳಿಕೆ ದಾಖಲಿಸಿದ್ದಾರೆ.