×
Ad

VIDEO- 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಕಾರ್ಯಕರ್ತರು ಪೊಲೀಸ್ ವಶಕ್ಕೆ

Update: 2023-01-09 20:00 IST

ಬೆಂಗಳೂರು, ಜ.9: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುರಿತಾದ 'ಸಿದ್ದು ನಿಜ ಕನಸುಗಳು' ಪುಸ್ತಕಕ್ಕೆ ವಿರೋಧ ವ್ಯಕ್ತಪಡಿಸಿ ಟೌನ್ ಹಾಲ್ ಮುಂದೆ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಆಡಳಿತ ಸಂದರ್ಭದಲ್ಲಿ ಸಾಧನೆಗಳ  ಪೋಸ್ಟರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ನಂತರ ಬಿಡುಗಡೆ ಮಾಡಿದರು. ಜೊತೆಗೆ ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಕೂಡಾ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿತು. ಪುಸ್ತಕ ವಿವಾದದ ಹಿನ್ನಲೆಯಲ್ಲಿ ಟೌನ್ ಹಾಲ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆಗೆ ಕೋರ್ಟ್ ನಿಂದ ತಡೆಯಾಜ್ಞೆ  

Full View

Similar News