ಜ.12ಕ್ಕೆ ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ; ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ

Update: 2023-01-09 16:59 GMT

ಬೆಂಗಳೂರು, ಜ. 9: ಪ್ರಧಾನಿ ಮೋದಿಯವರು ಜ.12ರ ಮಧ್ಯಾಹ್ನ ಹುಬ್ಬಳ್ಳಿ ನಗರಕ್ಕೆ ಆಗಮಿಸುತ್ತಿದ್ದು, ‘ರಾಷ್ಟ್ರೀಯ ಯುವಜನೋತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಳ್ಳಿಯಲ್ಲಿ ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮೋದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ದಿಲ್ಲಿಗೆ ಹಿಂದಿರುಗಲಿದ್ದಾರೆ ಎಂದು ಹೇಳಿದರು.

ಜ.19ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ-ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ(ಎನ್‍ಎಲ್‍ಬಿಸಿ)ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Similar News