×
Ad

ಡಿ.ಫಾರ್ಮ ಕೋರ್ಸಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Update: 2023-01-09 22:53 IST
Editor : Ashwani

ಬೆಂಗಳೂರು, ಜ. 9: ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿ ವತಿಯಿಂದ  2022-23ನೇ ಶೈಕ್ಷಣಿಕ ಸಾಲಿನ ಸರಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಖಾಸಗಿ ಡಿ.ಫಾರ್ಮಸಿ ವಿದ್ಯಾ ಸಂಸ್ಥೆಗಳಲ್ಲಿರುವ ಸರಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್‍ಸೈಟ್ www.beadpharmacy.org  ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಜ.20 ರೊಳಗೆ ಸಲ್ಲಿಸಬೇಕು. ಸೀಟು ಹಂಚಿಕೆಯ ಪ್ರಕ್ರಿಯೆಯ ದಿನಾಂಕ, ಸಮಯಗಳನ್ನು ವೆಬ್‍ಸೈಟ್ https://www.beadpharmacy.org/ ನಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಹತೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2248 3465, 080-2222 2681 ಇ-ಮೇಲ್ beadpharmacy@yahoo.com  and  principal.gcp123@gmail.com ಅನ್ನು ಸಂಪರ್ಕಿಸಲು ಔಷಧ ನಿಯಂತ್ರಣ ಇಲಾಖೆ, ಪರೀಕ್ಷಾ ಪ್ರಾಧಿಕಾರ ಮಂಡಳಿಯ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - Ashwani

contributor

Editor - Ashwani

contributor

Similar News