ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಎಂ.ಆರ್.ಸೀತಾರಾಮ್ ನೇಮಕ

Update: 2023-01-09 18:36 GMT

ಬೆಂಗಳೂರು, ಜ.9: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುತ್ತಿದ್ದಂತೆ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆಪಿಸಿಸಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ನಿಯೋಜಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ನಾರಾಯಣಸ್ವಾಮಿ ಅವರನ್ನು ಹೆಚ್ಚುವರಿಯಾಗಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು.

ಎಂ.ಆರ್.ಸೀತಾರಾಮ್ ಈ ಹಿಂದೆ ನೇಮಿಸಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಉಪಾಧ್ಯಕ್ಷರಾಗಿ ಮುಂದುವರೆದು ಕಾರ್ಯನಿರ್ವಹಿಸಲಿದ್ದಾರೆ. ಎಂ.ನಾರಾಯಣಸ್ವಾಮಿ ಅವರನ್ನು ಎಂದಿನಂತೆ ಕೆಪಿಸಿಸಿ ಕಾರ್ಯಕ್ರಮ, ಸಭೆಗಳು ಹಾಗೂ ಕಂಟ್ರೋಲ್ ರೂಂ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ ಎಂದು ಶಿವಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News