ಬೆಂಗಳೂರು | ಕುಸಿದು ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್: ತಾಯಿ, ಮಗು ಮೃತ್ಯು

Update: 2023-01-10 08:01 GMT

ಬೆಂಗಳೂರು, ಜ.10: ನಗರದಲ್ಲಿ  ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್  ರಾಡ್‌ಗಳು ಕುಸಿದು ಬಿದ್ದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಹಾಗೂ ಮಗು ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ವರದಿಯಾಗಿದೆ.

ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2) ಎಂದು ಗುರುತಿಸಲಾಗಿದೆ. 

ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಕಲ್ಯಾಣ್‌ನಗರದಿಂದ ಎಚ್‌ಆರ್‌ಬಿಆರ್‌ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಮೆಟ್ರೊ ರೈಲು ಪಿಲ್ಲರ್‌ ರಾಡ್‌ಗಳು ಕುಸಿದು ಬಿದ್ದಿವೆ.  ಘಟನೆಯಲ್ಲಿ  ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ, ಆತನ ಪತ್ನಿ ಹಾಗೂ ಅವರ ಪುತ್ರ (2 ವರ್ಷದ ಮಗು) ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ತಾಯಿ, ಮಗು ಇಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಇದನ್ನೂ ಓದಿ: ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಟೇಕಾಫ್ ಆದ ವಿಮಾನ; ಪ್ರಯಾಣಿಕರ ಆಕ್ರೋಶ

Similar News