×
Ad

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘಕ್ಕೆ ಆಯ್ಕೆ

Update: 2023-01-10 18:25 IST

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನೂತನ ಸಂಚಾಲಕ ಹಾಗೂ ದ.ಕ. ಜಿಲ್ಲಾ ಉಸ್ತುವಾರಿಯಾಗಿ ನೂರ್ ಮುಹಮ್ಮದ್ ಆಯ್ಕೆಯಾಗಿದ್ದಾರೆ.

ನೂರ್ ಮುಹಮ್ಮದ್ ದ.ಕ. ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷರೂ ಆಗಿದ್ದರು.

ನಗರದ ಎಮ್ಮೆಕೆರೆ ಬಳಿಯ ಕನ್ವೆನ್ಶನ್ ಸೆಂಟರ್‌ನಲ್ಲಿ ಚುನಾವಣಾ ಪ್ರಕ್ರಿಯೆ ನಡೆದು ಸಂಘವನ್ನು ಉದ್ಘಾಟಿಸಲಾಯಿತು. ಸುಮಾರು ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಪ್ರಕಟನೆ ತಿಳಿಸಿದೆ.

Similar News