ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
Update: 2023-01-10 19:10 IST
ಮಡಿಕೇರಿ ಜ.10 : ಮಡಿಕೇರಿಯ ಮೆಡಿಕಲ್ ಕಾಲೇಜಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆಯ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತ (19) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಇದನ್ನೂ ಓದಿ: ಮಂಡ್ಯ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ