×
Ad

ಬಂಟ್ವಾಳ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

Update: 2023-01-11 10:00 IST

ಬಂಟ್ವಾಳ: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಉನ್ನತೀಕರಿಸುವ ಉದ್ದೇಶದಿಂದ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಷಯವಾರು ತರಬೇತಿ ಮತ್ತು ಪ್ರೇರಣಾ ತರಗತಿ ಕಾರ್ಯಾಗಾರ ಸಾಲೆತ್ತೂರಿನ ಕಡುಮಠ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಶಿಕ್ಷಣ ತಜ್ಞ, ತರಬೇತುದಾರರಾದ ಮುಹಮ್ಮದ್ ರಫೀಕ್ ಮಾಸ್ಟರ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾ ತರಬೇತಿ ನೀಡಿದರು. ಅತಿಥಿಗಳು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಟ್ಯಾಲೆಂಟ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಹಮೀದ್ ಕಣ್ಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಭಟ್ ವಿದ್ಯಾರ್ಥಿಗಳಿಗೆ ಗಣಿತ  ತರಗತಿಯನ್ನು ನಡೆಸಿದರು.

ಸ.ಹಿ.ಪ್ರಾ ಶಾಲೆ ಕಾಡುಮಠ ಇದರ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಆರಿಫ್, ಅಬ್ದುಲ್ ಹಕೀಂ ಪರ್ತಿಪ್ಪಾಡಿ, ಟಿ.ಆರ್.ಎಫ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ನಕಾಶ್ ಬಾಂಬಿಲ ಉಪಸ್ಥಿತರಿದ್ದರು.

ಈ ಕಾರ್ಯಾಗಾರದಲ್ಲಿ ಸರಕಾರಿ ಪ್ರೌಢಶಾಲೆ ಸಾಲೆತ್ತೂರು, ಸರಕಾರಿ ಪ್ರೌಢಶಾಲೆ ಕಾಡುಮಠ ಇದರ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಭಾಗವಹಿಸಿದರು.

ಸರಕಾರಿ ಪ್ರೌಢಶಾಲೆ ಕಾಡುಮಠ ಇದರ ಪ್ರಭಾರ ಮುಖ್ಯ ಶಿಕ್ಷಕಿ ವಿನಯ ಪ್ರಭಾ ಸ್ವಾಗತಿಸಿದರು. ದೈಹಿಕ ಶಿಕ್ಷಕ ಇಬ್ರಾಹಿಂ ವಂದಿಸಿದರು. ಕನ್ನಡ ಅಧ್ಯಾಪಕ ರಾಜೀವ  ಕಾರ್ಯಕ್ರಮ ನಿರೂಪಿಸಿದರು.

Similar News