ಶಿವಮೊಗ್ಗ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು

Update: 2023-01-11 12:28 GMT

ಶಿವಮೊಗ್ಗ: ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. 

10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಬುಧವಾರ ಜಯಂತ್ ಎಂದಿನಂತೆ ಶಾಲೆಗೆ ಹೊರಡುತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ ನನ್ನು ಸಮೀಪದ ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಅಷ್ಟರಲ್ಲೇ ಜಯಂತ ಹೃದಯಾಘಾತದಿಂದ ಮೃತ ಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. 

ಇದನ್ನೂ ಓದಿ: ಕೊಡಗು: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಮೃತ್ಯು

Similar News