ಮಂಗಳೂರು: ಜ.14ರಂದು ಸರಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ
ಮಂಗಳೂರು: ರಾಜ್ಯ ಸರಕಾರಿ ನೌಕರರ ಸಂಘದ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ (ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿ) ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.14ರ ಬೆಳಗ್ಗೆ 10:30ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು. ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪ್ರತಿಭಾ ಪುರಸ್ಕಾರ ನೀಡುವರು. ದ.ಕ.ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ವಿದ್ಯಾರ್ಥಿಗಳನ್ನು ಸನ್ಮಾನಿಸುವರು ಎಂದು ತಿಳಿಸಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಪಂ ಸಿಇಒ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯ್ಕ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಟಿ., ಖಜಾಂಚಿ ಶ್ರೀನಿವಾಸ್ ಆರ್., ಉಪಾಧ್ಯಕ್ಷರಾದ ರುದ್ರಪ್ಪಎಂ.ವಿ., ಎಸ್. ಬಸವರಾಜು, ರಾಜ್ಯ ಗೌರವಾಧ್ಯಕ್ಷ ವೆಂಕಟೇಶಯ್ಯ ಬಿ.ಎಚ್., ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್, ರಾಜ್ಯ ಕಾರ್ಯದರ್ಶಿ ಸದಾನಂದ ನಿಲ್ಕುದ್ರಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನವೀನ್ ಕುಮಾರ್ ಎಂ.ಎಸ್, ಕಾರ್ಯದರ್ಶಿ ಗಣೇಶ್ ರಾವ್, ಲಿಲ್ಲಿ ಪಾಯಸ್, ಉಪಾಧ್ಯಕ್ಷ ಹರೀಶ್ ಕುಮಾರ್ ಎಂ. ಉಪಸ್ಥಿತರಿದ್ದರು.