ಉಡುಪಿ | ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿಗಳ ಸೀಮಾ / ಗಡಿ ನಿರ್ಣಯ ಪ್ರಕಟ: ಆಕ್ಷೇಪಣೆಗೆ ಆಹ್ವಾನ

Update: 2023-01-11 13:15 GMT

ಉಡುಪಿ: ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯವನ್ನು ಪ್ರಕಟಿಸಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜನವರಿ 16 ಸಂಜೆ 5 ಗಂಟೆಯ ಒಳಗೆ ಆನ್‌ಲೈನ್- https://rdpr.karnataka.gov.in/rdc/public/- ಮೂಲಕ ಅಥವಾ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/ಎ, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು ಇವರಿಗೆ ಖುದ್ದಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Similar News