ಉಡುಪಿ: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Update: 2023-01-11 19:54 IST
ಉಡುಪಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಗಮದ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ -https://sevasindhu.karnataka.gov.in- ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574884ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.