×
Ad

ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯ ಜಯರಾಮ ಶೆಟ್ಟಿ ಹೃದಯಾಘಾತದಿಂದ ನಿಧನ

Update: 2023-01-11 22:14 IST

ಉಳ್ಳಾಲ: ದೇರಳಕಟ್ಟೆಯ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಡಾ. ಜಯರಾಮ ಶೆಟ್ಟಿ (53) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.

ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ರೇಡಿಯೇಷನ್ ಆಂಕಾಲಜಿ ವಿಷಯದಲ್ಲಿ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಕ್ಕಿಂತ ಹೆಚ್ಚು ಕಾಲ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ  ಸೇವೆ ಸಲ್ಲಿಸಿ, ಬಳಿಕ  ಕಳೆದ 11 ವರುಷಗಳಿಂದ ದೇರಳಕಟ್ಟೆಯ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಬುಧವಾರ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಮನೆಗೆ ತೆರಳಿದ್ದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಹೊರಡುತ್ತಿದ್ದಾಗ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದ ಅವರು  ಅನೇಕ ಬಡ ರೋಗಿಗಳ ಚಿಕಿತ್ಸೆಗೆ ಸಹಾಯಹಸ್ತ ನೀಡುತ್ತಿದ್ದರು.

ಡಾ. ಜಯರಾಮ ಶೆಟ್ಟಿ ನಿಧನಕ್ಕೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಎನ್. ವಿನಯ ಹೆಗ್ಡೆ, ಆಡಳಿತ ಮಂಡಳಿ, ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. 

ಮೃತರು ಪತ್ನಿ ಜ್ಯೋತಿ, ಪುತ್ರಿ ವೀಕ್ಷಣಾ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Similar News