ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ, ವಿಮಾನ ನಿಲ್ದಾಣದಿಂದ ರೋಡ್ ಶೋ

Update: 2023-01-12 10:56 GMT

ಹುಬ್ಬಳ್ಳಿ: ಇಲ್ಲಿ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ಕಾರ್ಯಕ್ರಮದ ಮೈದಾನಕ್ಕೆ ತೆರಳಿದ್ದಾರೆ. 

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಇತರ ಗಣ್ಯ ವ್ಯಕ್ತಿಗಳು ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋತ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಹಾಜರಿದ್ದರು.

ಧಾರವಾಡದಲ್ಲಿ ಇಂದಿನಿಂದ (ಜನವರಿ 12)  ರಾಷ್ಟ್ರೀಯ ಯುವ ಜನೋತ್ಸವ ಪ್ರಾರಂಭವಾಗಲಿದ್ದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. 

Similar News