ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ

Update: 2023-01-12 15:41 GMT

ಬೆಂಗಳೂರು, ಜ.12: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಹೆಗಡೆ ನಗರದ ನಿವಾಸಿ ನವೀನ್ ಕುಮಾರ್ (25) ಆತ್ಮಹತ್ಯೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಇಲ್ಲಿನ ಜಯಮಹಲ್ ರಸ್ತೆಯಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧಿಕೃತ ಸರಕಾರಿ ನಿವಾಸದ ಭದ್ರತಾ ಕರ್ತವ್ಯದಲ್ಲಿ ಮಂಗಳವಾರ ನವೀನ್ ಎಡಗೈ ಕುಯ್ದುಕೊಂಡು ನಿತ್ರಾಣನಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದರು ಎಂದು ಮೂಲಗಳು ತಿಳಿಸಿವೆ.

ಸದ್ಯ ಆತ ಪ್ರಾಣಪಾಯದಿಂದ ಸುರಕ್ಷಿತವಾಗಿದ್ದಾನೆ.ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

Similar News