ಕಣಚೂರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಯೂತ್ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕೊಣಾಜೆ: ಕಣಚೂರು ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ಯುವ ರೆಡ್‌ಕ್ರಾಸ್ ಘಟಕದ ಉದ್ಘಾಟನೆ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರ ನಡೆಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಇಂಡಿಯನ್ ಅಸೋಸಿಯೇಷನ್ ಫಿಸಿಯೋಥೆರಪಿ ಇದರ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಅಲಿ, "ಸಮಾಜ ಸೇವಾ ಮನೋಭಾವ ಸದಾ ನಮ್ಮಲ್ಲಿರಬೇಕು. ಈ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ ಆರಂಭಿಸಿರುವುದು ಶ್ಲಾಘನೀಯವಾಗಿದೆ. ಈ ಘಟಕದ ಮೂಲಕ ಅನೇಕ ಕಾರ್ಯಕ್ರಮಗಳು ಮೂಡಿ ಬರಲಿ" ಎಂದರು.
ಕಣಚೂರ್ ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಹಾಜಿ ಯು. ಕೆ. ಮೋನು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಇಂದಿನ ಆಧುನಿಕ ಸಮಾಜದಲ್ಲಿ ಯುವ ಸಮುದಾಯದಲ್ಲಿ ಮಾನವೀಯ ಸೇವೆಗಳ ಅಗತ್ಯತೆ ಇದೆ. ಸಮಾಜಸೇವೆ ಕಾರ್ಯಗಳಲ್ಲಿ ಯುವಕರು ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಯುವ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ಸಚೇತ್ ಸುವರ್ಣ, ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ ನಿರ್ದೇಶಕ ಅಬ್ದುಲ್ ರಹಿಮಾನ್, ಕನಚೂರ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲೆ ಪ್ರೊ. ಮೊಲಿ ಸಲ್ಡಾನ್ಹಾ, ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಡೀನ್ ಡಾ.ಕೆ ಜಿ ಕಿರಣ್ , ವೈದ್ಯಕೀಯ ಅಧೀಕ್ಷಕರು ಡಾ.ಹರೀಶ್ ಶೆಟ್ಟಿ, ಮುಖ್ಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್
ಕೋಟೆಕಾರ್ ಪಂಚಾಯತ್ ಸದಸ್ಯರಾದ ಹರೀಶ್ ರಾವ್, ಸಲಿಮಾ ಬಿ ಎಂ, ಕೊಯೆಲ್ಹೋ ಉಪಸ್ಥಿತರಿದ್ದರು.
ಯೂತ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ನೀತಾ ಕೊಯೆಲ್ಹೋ ಸ್ವಾಗತಿಸಿ, ಆನ್ ಬಾರ್ನೆಸ್ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಶೆರಿನ್ ಜೋಸೆಫ್ , ಮರಿಯಾ ಸನ್ನಿ ಕಾರ್ಯಕ್ರಮ ನಿರೂಪಿಸಿದರು.