×
Ad

ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಷ್ ಹೆಸರಿಡಲು ವಾಣಿಜ್ಯ ಮಂಡಳಿ ಮನವಿ

Update: 2023-01-12 22:43 IST

ಬೆಂಗಳೂರು, ಜ.12: ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಕೇಂದ್ರ ಸಚಿವ ಡಾ. ಅಂಬರೀಷ್ ಅವರ ಹೆಸರನ್ನು ಆರ್.ಸಿ.ಕಾಲೇಜು ವೃತ್ತದಿಂದ ಮೌರ್ಯ ವೃತ್ತ ಮತ್ತು ಆನಂದ್ ರಾವ್ ಸರ್ಕಲ್ ತನಕದ ರಸ್ತೆಗೆ ನಾಮಕರಣ ಮಾಡಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ನೇತೃತ್ವದ ನಿಯೋಗ ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ಮನವಿ ಮಾಡಿದೆ. 

ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ನೇತೃತ್ವದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಗ್ರ ಚಿತ್ರೋದ್ಯಮದ ಮಹದಾಸೆಗೆ ಪಾಲಿಕೆ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಹೆಸರು ಮತ್ತು ಅಪಾರ ಕೊಡುಗೆ ನೀಡಿರುವ ಸಾಧಕರುಗಳಾದ ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಬೆಂಗಳೂರಿನ ವಿವಿಧ ರಸ್ತೆಗೆ ನಾಮಕರಣ ಮಾಡಿರುವುದು ಶ್ಲಾಘನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ. 

ಅಂಬರೀಷ್ ಅವರಿಗೆ 70 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಅಂಬರೀಷ್ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಷ್ ಅವರ ಹೆಸರಿಡುವಂತೆ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗಳಿಗೂ ಮನವಿ ಮಾಡಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ತಿಳಿಸಿದ್ದಾರೆ. ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿಯ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Similar News