ಮಂಗಳೂರು ಗಾಂಜಾ ಮಾರಾಟ ಜಾಲ ಪ್ರಕರಣ: ಮತ್ತೆ ಇಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ; ಬಂಧಿತರ ಸಂಖ್ಯೆ 15ಕ್ಕೆ ಏರಿಕೆ
Update: 2023-01-13 12:02 IST
ಮಂಗಳೂರು: ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಮತ್ತೆ ಇಬ್ಬರು ವೈದ್ಯ ವಿದ್ಯಾರ್ಥಿಗಳನ್ನು ಶುಕ್ರವಾರ ಬಂಧಿಸಿದ್ದಾರೆ
ವೈದ್ಯ ವಿದ್ಯಾರ್ಥಿಗಳಾದ ಆಂಧ್ರಪ್ರದೇಶದ ಡಾ. ರಾಘವ ದತ್ತಾ(28), ಬೆಂಗಳೂರು ನಿವಾಸಿ ಡಾ: ಬಾಲಾಜಿ (29) ಬಂಧಿತ ಆರೋಪಿಗಳು. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
10 ದಿನಗಳಲ್ಲಿ ಮಂಗಳೂರು ಕಮಿಶನರೇಟ್ ವ್ಯಾಪ್ತಿಯಲ್ಲಿ 6 ಪ್ರಕರಣಗಳಲ್ಲಿ 20ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.