ಬೆಂಗಳೂರು ವಿವಿ: ಸಹಾಯಕ ಗ್ರಂಥಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

Update: 2023-01-13 16:00 GMT

ಬೆಂಗಳೂರು, ಜ.13: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಗ್ರಂಥಾಲಯಗಳಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಅವಧಿಗೆ ಸಹಾಯಕ ಗ್ರಂಥಪಾಲಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿದೆ.

ಈ ನೇಮಕಾತಿಗಳು ತಾತ್ಕಾಲಿಕ ನೇಮಕಾತಿಯಾಗಿದ್ದು, ಯಾವ ಕಾರಣಗಳನ್ನು ನೀಡದೆ ರದ್ದುಗೊಳಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಅಂಕಪಟ್ಟಿ ಮತ್ತು ಇತರೆ ಪೂರಕ ದಾಖಲೆಗಳೊಂದಿಗೆ ಸ್ವ-ದೃಢೀಕರಿಸಿ, ಸಹಾಯಕ ಕುಲಸಚಿವರು, ಸಿಬ್ಬಂದಿ ವಿಭಾಗ 1, ಆಡಳಿತ ಕಛೇರಿ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಂಗಳೂರು-560056 ಈ ವಿಳಾಸಕ್ಕೆ ಸಲ್ಲಿಸಬೇಕು.

ಅಧಿಸೂಚನೆ ಹಾಗೂ ಅರ್ಜಿ ನಮೂನೆ ಮತ್ತು ಇನ್ನಿತರ ಮಾನದಂಡಗಳನ್ನು ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ www.bangaloreuniversity.ac.in ರಲ್ಲಿ ನೋಡಿ ತಿಳಿದುಕೊಳ್ಳಬಹುದಾಗಿದೆ ಎಂದು ಬೆಂಗಳೂರು ವಿವಿ ಪ್ರಕಟನೆಯಲ್ಲಿ ತಿಳಿಸಿದೆ.

Similar News