ನ್ಯೂಝಿಲ್ಯಾಂಡ್ ವಿರುದ್ಧ ಏಕದಿನ, ಟ್ವೆಂಟಿ-20 ಸರಣಿಗೆ ಭಾರತ ತಂಡ ಪ್ರಕಟ

Update: 2023-01-13 18:02 GMT

  ಹೊಸದಿಲ್ಲಿ, ಜ.13: ಕೌಟುಂಬಿಕ ಕಾರಣದಿಂದಾಗಿ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಹಾಗೂ ಆಲ್‌ರೌಂಡರ್ ಅಕ್ಷರ್ ಪಟೇಲ್ ನ್ಯೂಝಿಲ್ಯಾಂಡ್ ವಿರುದ್ಧದ ಸೀಮಿತ ಓವರ್ ಕ್ರಿಕೆಟ್ ಸರಣಿಯಿಂದ ಹೊರಗುಳಿದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ವಾಪಸಾಗಲಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ತಿಳಿಸಿದೆ.

ಚೇತನ್ ಶರ್ಮಾ ನೇತೃತ್ವದ ನೂತನ ಆಯ್ಕೆ ಸಮಿತಿಯು ಜನವರಿ 18ರಿಂದ ಆರಂಭವಾಗಲಿರುವ ಕಿವೀಸ್ ವಿರುದ್ಧದ ಏಕದಿನ, ಟ್ವೆಂಟಿ-20 ಸರಣಿ, ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಸರಣಿಗೆ ತಂಡಗಳನ್ನು ಪ್ರಕಟಿಸಿದ್ದು, ಸೂರ್ಯಕುಮಾರ್ ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆಯಾದರೆ, ಇಶಾನ್ ಕಿಶನ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತವು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಟ್ವೆಂಟಿ-20 ಸರಣಿಯನ್ನು ಆಡಲಿದೆ. ಬಿಸಿಸಿಐ ಆಸ್ಟ್ರೇಲಿಯ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ರವೀಂದ್ರ ಜಡೇಜ ತಂಡಕ್ಕೆ ಸೇರಿದ್ದಾರೆ.

ಏಕದಿನ ತಂಡ: ರೋಹಿತ್ ಶರ್ಮಾ(ನಾಯಕ)ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್‌ಪಾಂಡ್ಯ(ಉಪ ನಾಯಕ), ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್,ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ಟ್ವೆಂಟಿ-20 ತಂಡ: ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್(ಉಪ ನಾಯಕ), ಇಶಾನ್ ಕಿಶನ್, ಆರ್.ಗಾಯಕ್ವಾಡ್, ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ, ಸುಂದರ್, ಕುಲದೀಪ್, ಚಹಾಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್ ಕುಮಾರ್.
 

Similar News