ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

Update: 2023-01-13 18:34 GMT

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ನಿಷೇದಿಕೆ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು  ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 27,100 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ
ಕಾಸರಗೋಡು ಬಂಬ್ರಾಣದ ಮುಗೇರ್‌ನ  ಕಿರಣ್ ರಾಜ್ ಶೆಟ್ಟಿ(24) ಬಂಧಿತ ಆರೋಪಿ.

ಈತ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಪತ್ತೆ ಹಚ್ಚಿ  ವಶಪಡಿಸಿಕೊಂಡರು.

ವಶಪಡಿಸಿಕೊಂಡ ಗಾಂಜಾ, ಕಾರು, ಮೊಬೈಲ್ ಫೋನ್‌ನ ಒಟ್ಟು ಮೌಲ್ಯ ರೂ. 9,88,500. ಅರೋಪಿ ಕಿರಣ್ ರಾಜ್ ಶೆಟ್ಟಿಯ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಕೂಡ ದಾಖಲಾಗಿದೆ.

Similar News