ಸುರತ್ಕಲ್‌: ಗುಡ್ಡ ಕುಸಿತ; ಓರ್ವ ಮೃತ್ಯು

Update: 2023-01-13 18:49 GMT

ಸುರತ್ಕಲ್‌: ಗುಡ್ಡ ಕುಸಿದು ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಚೇಳೈರು ಗ್ರಾಮದ ಚೇಳೈರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ಓಬಲೇಶ್ವರ ಎಂದು ತಿಳಿದು ಬಂದಿದೆ. 

ರೈಲ್ವೇ ಸೇತುವೆಯ ಮೇಲ್ಭಾಗದಲ್ಲಿ ಕಂಬಿಗಳನ್ನು ನೇರಮಾಡುತ್ತಿದ್ದ ಸಂದರ್ಭ ಕಾರ್ಮಿಕರು ಕೆಳಭಾಗದಲ್ಲಿ ಗುಡ್ಡ ಅಗೆಯುತ್ತಿದ್ದರು. ಈ ವೇಳೆ ರೈಲೊಂದು ಏಕಾಏಕಿ ಬಂದ ಪರಿಣಾಮ ಭೂಮಿ ಕುಸಿದು ಗುಡ್ಡದ ಕೆಳಭಾಗದಲ್ಲಿ ಅಗೆಯುತ್ತಿದ್ದ ಕಾರ್ಮಿಕರ ಮೇಲೆ ಗುಡ್ಡ ಕುಸಿದಿದೆ ಎನ್ನಲಾಗಿದೆ. 

ಈ ವೇಳೆ ಗುಡ್ಡ ಕಾರ್ಮಿಕರಾದ ಓಬಳೇಶ್ವರಪ್ಪ, ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ರೇಖಾ ಅವರ ಮೇಲೆ ಬಿದ್ದಿದೆ. ಈ ಪೈಕಿ ಓಬಳೇಶ್ವರ ಮತ್ತು ಬಳ್ಳಾರಿ ಗೋವಿಂದಪ್ಪ ಅವರ ಮೈಮೇಲೆ ಹೆಚ್ಚಿನ ಪ್ರಮಾಣದ ಮಣ್ಣುಬಿದ್ದಿದೆ ಎನ್ನಲಾಗಿದೆ. ಮಣ್ಣಿನ ಅಡಿಗೆ ಬಿದ್ದಿದ್ದ ಇಬ್ಬರನ್ನೂ ಸಮೀಪದ ಖಾಸಗಿ ಆಸ್ಪತೆರೆಗ ದಾಖಲಾಗಿದ್ದು, ಈ ವೇಳೆ ಓಬಳೇಶ್ವರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಗೋವಿಂದಪ್ಪ ಅವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಕಾರ್ಮಿಕರಾದ ಕಿಟ್ಟರಾಜ ಅವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
 

Similar News