ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಕೊಲೆ ಬೆದರಿಕೆ

Update: 2023-01-14 11:28 GMT

ಮುಂಬೈ: ಮಹಾರಾಷ್ಟ್ರದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರ ಕಚೇರಿಗೆ ಶನಿವಾರ ಬೆದರಿಕೆ ಕರೆ ಬಂದಿದೆ ಎಂದು ನಾಗ್ಪುರ ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಕಚೇರಿಯನ್ನು ಸ್ಫೋಟಿಸುವುದಾಗಿ ಕೂಡಾ ಬೆದರಿಕೆ ಹಾಕಿದ್ದಾನೆ ಎಂದು ndtv.com ವರದಿ ಮಾಡಿದೆ.

ನಿತಿನ್ ಗಡ್ಕರಿ ಅವರ ಕಚೇರಿಯಿಂದ ಬಂದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಾಗ್ಪುರದ ಉಪ ಪೊಲೀಸ್ ಆಯುಕ್ತ ರಾಹುಲ್ ಮದನೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಕಚೇರಿಗೆ ಬೆಳಿಗ್ಗೆ 11.25, 11:32 ಮತ್ತು ಮಧ್ಯಾಹ್ನ 12:30 ಕ್ಕೆ ಬೆದರಿಕೆ ಕರೆಗಳು ಬಂದಿವೆ.
 
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ನಾಗ್ಪುರದ ಖಮ್ಲಾ ಚೌಕ್‌ನಲ್ಲಿದೆ, ಇದು ಅವರ ಮನೆಯಿಂದ ಸುಮಾರು 1 ಕಿಲೋಮೀಟರ್ ದೂರದಲ್ಲಿದೆ.

ಇದನ್ನೂ ಓದಿ: ಜೋಷಿಮಠ ಭೂಕುಸಿತದ ಕುರಿತ ಇಸ್ರೋ ವರದಿ ಸರ್ಕಾರಿ ವೆಬ್‌ಸೈಟ್‌ನಿಂದ ನಾಪತ್ತೆ

Similar News