ಬೆಳ್ತಂಗಡಿ: ದಲಿತ ಯುವಕನ ಅಸಹಜ ಸಾವು ಪ್ರಕರಣ; ನಾಲ್ವರು ಆರೋಪಿಗಳ ಬಂಧನ

Update: 2023-01-14 17:39 GMT

ಬೆಳ್ತಂಗಡಿ: ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು.

ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆ ಮೂಲದ ದಲಿತ ಯುವ ಶ್ರೀಧರ (30)ಎಂಬವರ ಮೃತದೇಹ ಕಳೆದ ಡಿ 18ರಂದು ಬೆಳಗ್ಗೆ ಇವರು ಕೆಲಸ ಮಾಡುವ ತೋಟದ ಮೂಲೆಯಲ್ಲಿ ಕಂಡು ಬಂದಿತ್ತು.

ಇದೊಂದು ವ್ಯವಸ್ಥಿತ ಕೊಲೆ ಎಂಬ ಅನುಮಾನ ವ್ಯಕ್ತವಾಗಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ದ ಕೊಲೆ ಹಾಗೂ ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿತ್ತು. ಘಟನೆಯ ಬಳಿಕ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳು ಪ್ರತಿಭಟನೆಗೂ ಮುಂದಾಗಿದ್ದರು. ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನೂ ಬಂಧಿಸಿರುವುದಾಗಿ ತಿಳಿದು ಬಂದಿದೆ.

Similar News