ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಶಿಕ್ಷೆ

Update: 2023-01-14 17:50 GMT

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.

ನಗರದ ಬಿಜೈ ಕಾಪಿಕಾಡು ನಿವಾಸಿ ಶೇಖರ ಯಾನೆ ಜೆ.ಡಿ.ಚಂದ್ರಶೇಖರ್ ಶಿಕ್ಷೆಗೊಳಗಾದ ಆರೋಪಿ. ಈತ 2022ರ ಜೂ.21ರಂದು ಬೆಳಗ್ಗೆ ನಗರದ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರು ನೀಡಲಾಗಿತ್ತು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಎಸ್ಸೈ ಶ್ರೀಕಲಾ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಆರೋಪಿಗೆ ಪೊಕ್ಸೊ ಕಾಯ್ದೆಯ ಕಲಂ8 ರಂತೆ 5 ವರ್ಷ ಸಾದಾ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆಯೂ ಅದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

Similar News