ಭಾರತ್‌ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಹತ್ಯೆಗೀಡಾದ ಗಾಯಕ ಸಿಧು ಮೂಸೆವಾಲ ತಂದೆ

Update: 2023-01-15 16:36 GMT

ಅಮೃತಸರ್:‌ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ತಂದೆ   ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿ ರಾಹುಲ್‌ ಗಾಂಧಿಯವರೊಡನೆ ಹೆಜ್ಜೆ ಹಾಕಿದರು. ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರನ್ನು ಮೂಸೆವಾಲರ ತಂದೆ ಬಲ್ಕೌರ್ ಸಿಂಗ್ ಸಿಧು ಭೇಟಿಯಾದ ವಿಡಿಯೋವನ್ನು ಕಾಂಗ್ರೆಸ್‌ ಪಕ್ಷವು ಟ್ವೀಟ್ ಮಾಡಿದೆ.

"ಪ್ರಸಿದ್ಧ ಪಂಜಾಬಿ ಗಾಯಕ ದಿವಂಗತ ಸಿಧು ಮುಸೇವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಸಿಧು ಜಿ ಅವರು ರಾಹುಲ್ ಗಾಂಧಿ ಜೊತೆಗೆ ದ್ವೇಷ, ಭಯ ಮತ್ತು ಹಿಂಸಾಚಾರವನ್ನು ಹರಡುವ ಶಕ್ತಿಗಳಿಗೆ ತಕ್ಕ ಪ್ರತ್ಯುತ್ತರ ನೀಡಿದರು. ಪಂಜಾಬ್‌ನ ಮಾನ್ಸಾದಲ್ಲಿ ಹಾಡ ಹಗಲು  ಸಿಧು ಮುಸೇವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು." ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಳೆದ ವರ್ಷ ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸ್ ವಾಲಾ ಎಂದೇ ಖ್ಯಾತರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೆನಡಾ ಮೂಲದ ಸದಸ್ಯ ಗೋಲ್ಡಿ ಬ್ರಾರ್ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದ.

Similar News