2024ರಲ್ಲೂ ಮೋದಿಯೇ ಪ್ರಧಾನಿ ಎಂಬುವುದು ಗುಜರಾತ್ ಚುನಾವಣಾ ಫಲಿತಾಂಶದಿಂದ ಸ್ಪಷ್ಟ: ಅಮಿತ್ ಶಾ

Update: 2023-01-15 17:27 GMT

ಗಾಂಧಿನಗರ, ಜ. 15: ಇತ್ತೀಚೆಗೆ ಮುಕ್ತಾಯಗೊಂಡಿರುವ ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯು ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೂ ಮುಖ್ಯವಾಗಿದೆ. ಯಾಕೆಂದರೆ 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಪುನರಾಯ್ಕೆಗೊಳ್ಳುತ್ತಾರೆ ಎನ್ನುವ ಸಂದೇಶವನ್ನು ಅದು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಹೇಳಿದ್ದಾರೆ.

ಗುಜರಾತ್ ನ  ಜನತೆ ದಾಖಲೆಯ ಸ್ಥಾನಗಳಿಂದ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಗೆ ಸಹಾಯ ಮಾಡಿದ್ದಾರೆ, ಆ ಮೂಲಕ ರಾಜ್ಯ ಮತ್ತು ಪ್ರಧಾನಿ ಮೋದಿಯವರನ್ನು ಅವಮಾನಿಸಲು ಯತ್ನಿಸಿದವರಿಗೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಆಪ್)ವನ್ನು ಪರೋಕ್ಷವಾಗಿ ಉಲ್ಲೇಖಿಸುತ್ತಾ ಅವರು ಹೇಳಿದರು.

“ಜಾತೀಯತೆಯ ವಿಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಗುಜರಾತ್ನ ಜನತೆ ಶ್ರಮಿಸಿದ್ದಾರೆ ಹಾಗೂ ಪೊಳ್ಳು ಮತ್ತು ಸುಳ್ಳು ಭರವಸೆಗಳನ್ನು ನೀಡುವವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಗುಜರಾತ್ ಮತ್ತು ನರೇಂದ್ರ ಮೋದಿಗೆ ಅವಮಾನ ಮಾಡಲು ಯತ್ನಿಸಿದವರಿಗೆ ಗುಜರಾತ್ ಜನರು ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ’’ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆಗಳನ್ನು ನೆರವೇರಿಸಲು ಮತ್ತು ಯೋಜನೆಗಳನ್ನು ಉದ್ಘಾಟಿಸಲು ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನು ಓದಿ: ಬೆದರಿಕೆ ಕರೆಯಿಂದಾಗಿ 6 ಸಾವಿರ ಕೋಟಿ.ರೂ. ಯೋಜನೆ ಕರ್ನಾಟಕಕ್ಕೆ ಶಿಫ್ಟ್ ಆಗಿದೆ : ದೇವೇಂದ್ರ ಫಡ್ನವಿಸ್

Similar News