ಜ.18ರಂದು ‘ಸಂವಿಧಾನ ಅಭಿಯಾನೋತ್ಸವ’
Update: 2023-01-15 23:42 IST
ಬೆಂಗಳೂರು, ಜ.15: ದಲಿತ ವಿಮೋಚನಾ ಸೇನೆ ವತಿಯಿಂದ ಜ.18ರಂದು ಸಂವಿಧಾನ ಅಭಿಯಾನೋತ್ಸವ ಬೃಹತ್ ರಾಜ್ಯ ಸಮಾವೇಶವನ್ನು ವಸಂತನಗರದ ಡಾ.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಹಿಸಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟನೆ ನೇರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕರಾದ ಝಮೀರ್ ಅಹಮ್ಮದ್ ಖಾನ್, ಟಿ.ವೆಂಕಟರಮಣಯ್ಯ, ಭೈರತಿ ಸುರೇಶ್, ಸತೀಶ್ ಜಾರಕಿಹೊಳಿ, ರಿಜ್ವಾನ್ ಅರ್ಷದ್, ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಚಿಂತಕರಾದ ಕೋಟಿಗಾನಹಳ್ಳಿ ರಾಮಯ್ಯ, ಡಾ.ವಡ್ಡಗೆರೆ ನಾಗರಾಜಯ್ಯ, ಡಾ.ಬಂಜಗೆರೆ ಜಯಪ್ರಕಾಶ್, ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.