ಪ್ರತಿ ಮನೆಯ ಕುಟುಂಬದ ಗೃಹಿಣಿಗೆ ಮಾಸಿಕ 2,000 ರೂ.: ಕಾಂಗ್ರೆಸ್ 'ಗೃಹಲಕ್ಷ್ಮಿ' ಯೋಜನೆ ಘೋಷಣೆ

Update: 2023-01-16 10:12 GMT

ಬೆಂಗಳೂರು. ಜ.16: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ನೆರವು ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. 

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ನಾ ನಾಯಕಿ' ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಲ್ಲಿಸಲಾಯಿತು.

Full View

Similar News