ಬೆಳಗಾವಿ | ಅನಧಿಕೃತ ನಿರ್ಮಾಣದ ಆರೋಪ: ಫಾತಿಮಾ ಮಸೀದಿಗೆ ಬೀಗ

Update: 2023-01-17 04:55 GMT

ಬೆಳಗಾವಿ: ವಸತಿ ನಿವಾಸದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ನಗರದ ಫಾತಿಮಾ ಮಸೀದಿಗೆ ಬೀಗ ಜಡಿದಿರುವುದಾಗಿ ವರದಿಯಾಗಿದೆ.

ಇಲ್ಲಿನ ಸಾರಥಿ ನಗರದ ವಸತಿ ಪ್ರದೇಶದಲ್ಲಿ ಈ ಮಸೀದಿಯನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಮಸೀದಿ ವಿರುದ್ಧ ಸಂಘಪರಿವಾರದ ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. 

ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಫಾತಿಮಾ ಮಸೀದಿಯಲ್ಲಿ ಧಾರ್ಮಿಕ ಚಟುವಟಿಕೆಯನ್ನು ನಿಲ್ಲಿಸುವಂತೆ ವಕ್ಫ್ ಬೋರ್ಡ್‌ಗೆ ನೋಟಿಸ್ ನೀಡಿತ್ತು ಎನ್ನಲಾಗಿದೆ. ಇದೀಗ ಮಸೀದಿಗೆ ಪಾಲಿಕೆ ಅಧಿಕಾರಿಗಳು ಬೀಗ ಜಡಿದಿದ್ದಾರೆ ಎಂದು ತಿಳಿದು ಬಂದಿದೆ.

Similar News