ಪೊಲೀಸರಿಗೆ 'ಒಂದು ದೇಶ, ಒಂದು ಸಮವಸ್ತ್ರ': ರಾಜ್ಯ ಸರಕಾರ ತಾತ್ವಿಕ ಒಪ್ಪಿಗೆ

Update: 2023-01-17 14:08 GMT

ಬೆಂಗಳೂರು, ಜ.17:ದೇಶದ ಎಲ್ಲ ರಾಜ್ಯಗಳ ಪೊಲೀಸ್ ಸಿಬ್ಬಂದಿಗೆ ಅನ್ವಯಾಗುವಂತಹ ಏಕರೂಪದ ಸಮವಸ್ತ್ರ ಪದ್ಧತಿಯನ್ನು ಕರ್ನಾಟಕದಲ್ಲಿ ಜಾರಿಗೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿದೆ.

ಕೇಂದ್ರದ ಗೃಹ ಇಲಾಖೆಯು ಏಕರೂಪದ ಸಮವಸ್ತ್ರ ಜಾರಿಗೆ ತರುವ ಸಂಬಂಧಿಸಿದಂತೆ ರಾಜ್ಯ ಸರಕಾರಗಳ ಅಭಿಪ್ರಾಯ ಕೇಳಿದ್ದು, ರಾಜ್ಯ ಸರಕಾರ ದೇಶದ ಎಲ್ಲ ರಾಜ್ಯಗಳ ಪೊಲೀಸರಿಗೆ ಒಂದೇ ರೀತಿಯ ಸಮವಸ್ತ್ರವ್ಯವಸ್ಥೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿದೆ. 

ಈ  ವ್ಯವಸ್ಥೆ ಜಾರಿ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಪ್ರಸ್ತಾವನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಮ್ಮತಿ ಸೂಚಿಸಿದ್ದಾರೆ.

Similar News