ಬೈಕ್‍ಗೆ ಕ್ಯಾಂಟರ್ ಢಿಕ್ಕಿ: ಸವಾರರಿಬ್ಬರು ಸಾವು

Update: 2023-01-17 18:01 GMT

ಬೆಂಗಳೂರು, ಜ.17: ಬೈಕ್‍ಗೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಇಲ್ಲಿನ ಬ್ಯಾಡರಹಳ್ಳಿಯ ಅಂಜನಾನಗರ ಬಸ್ ನಿಲ್ದಾಣದ ಬಳಿ ನಡೆದಿದೆ.

ರವಿ(22) ವಿಕಾಸ್(20) ಮೃತಪಟ್ಟ ಯುವಕರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಕ್ಯಾಂಟರ್ ವಾಹನಗೆ ಗುದ್ದಿದೆ. ಢಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಅವರ ಮೇಲೆ ಕ್ಯಾಂಟರ್ ವಾಹನದ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು,ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News