ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ವಿಧಾನಸಭೆ ಚುನಾವಣೆ: ಇಂದು ಮಧ್ಯಾಹ್ನ ವೇಳಾಪಟ್ಟಿ ಪ್ರಕಟ

Update: 2023-01-18 05:33 GMT

ಹೊಸದಿಲ್ಲಿ: ನಾಗಾಲ್ಯಾಂಡ್, ಮೇಘಾಲಯ ಹಾಗೂ  ತ್ರಿಪುರಾ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಬುಧವಾರ ಪ್ರಕಟಿಸಲಿದೆ.

ಈ ನಿಟ್ಟಿನಲ್ಲಿ ಚುನಾವಣಾ ಸಮಿತಿಯು ಮಧ್ಯಾಹ್ನ 2.30ಕ್ಕೆ ಇಲ್ಲಿ ಪತ್ರಿಕಾಗೋಷ್ಠಿ ಕರೆದಿದೆ.

ತ್ರಿಪುರಾವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಳುತ್ತಿದ್ದರೆ, ಮೇಘಾಲಯ ಹಾಗೂ  ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ.

ನಾಗಾಲ್ಯಾಂಡ್, ಮೇಘಾಲಯ ಹಾಗೂ  ತ್ರಿಪುರಾ ವಿಧಾನಸಭೆಗಳ ಐದು ವರ್ಷಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಹಾಗೂ  ಮಾರ್ಚ್ 22 ರಂದು ಕೊನೆಗೊಳ್ಳಲಿದೆ.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ನೇತೃತ್ವದ ತಂಡವು ಮೂರು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿದ ನಂತರ ಕಳೆದ ವಾರ ಸರಣಿ ಸಭೆಗಳನ್ನು ನಡೆಸಲಾಯಿತು.

ಮೂರು ರಾಜ್ಯಗಳ ರಾಜಕೀಯ ಪಕ್ಷಗಳು ಅಧಿಕಾರಿಗಳು ಹಾಗೂ  ಕೇಂದ್ರ ಭದ್ರತಾ ಅಧಿಕಾರಿಗಳೊಂದಿಗೆ ಈ ಸಭೆಗಳನ್ನು ನಡೆಸಲಾಯಿತು.

Similar News