ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಕ್ಕಾಗಿ ತೇಜಸ್ವಿ ಸೂರ್ಯ ಕ್ಷಮೆಯಾಚಿಸಿದ್ದಾರೆ: ಜ್ಯೋತಿರಾದಿತ್ಯ ಸಿಂಧಿಯಾ

Update: 2023-01-18 12:28 GMT

ಹೊಸದಿಲ್ಲಿ: ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ತೆರೆದಿರುವುದನ್ನು ಸ್ವತಃ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತನ್ನ ಪ್ರಮಾದದ ಬಗ್ಗೆ ಸಂಸದರು ಕ್ಷಮೆಯನ್ನೂ ಕೇಳಿರುವುದಾಗಿ ಅವರು ತಿಳಿಸಿದ್ದಾರೆ.


  ಡಿಸೆಂಬರ್ 10 ರಂದು, ಚೆನ್ನೈ-ತಿರಿಚಿ ನಡುವಿನ ವಿಮಾನಯಾನದ ಬೋರ್ಡಿಂಗ್ ಪ್ರಕ್ರಿಯೆ ವೇಳೆ ಪ್ರಯಾಣಿಕನೊಬ್ಬರು  6E 7339 ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ಆಕಸ್ಮಿಕವಾಗಿ ತೆರೆದಿದ್ದಾರೆ. ನಂತರ ಅವರು ಕ್ಷಮೆಯಾಚಿಸಿದ್ದಾರೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ತಿಳಿಸಿತ್ತು. ಶಿಷ್ಟಾಚಾರ ಉಲ್ಲಂಘಿಸಿ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿರುವುದು ಸಂಸದ ತೇಜಸ್ವಿ ಸೂರ್ಯ ಅವರೇ ಎಂದು ಸಂಸ್ಥೆಯ ಮೂಲಗಳು ಹೇಳಿದ್ದವು. ಇದೀಗ ಸ್ವತಃ ಸಚಿವರೇ ಅದನ್ನು ಧೃಡ ಪಡಿಸಿದ್ದಾರೆ.

Similar News