SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Update: 2023-01-18 16:45 GMT

ಬೆಂಗಳೂರು, ಜ.18: ಪ್ರಸಕ್ತ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾ.31ರಿಂದ ಎ.15ರವರೆಗೆ ಪರೀಕ್ಷೆಗಳು ನಡೆಯಲಿವೆ. 

ಮಾ.31ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್‍ಸಿಇಆರ್‍ಟಿ) ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಎ.3ರಂದು ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಎ.6ರಂದು ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆಗಳು ನಡೆಯಲಿವೆ. 

 ಎ. 8 ರಂದು ಅರ್ಥಶಾಸ್ತ್ರ, ಎ.10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ. ಎ.12ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ. ಎ.15ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.   

Similar News