ಉಡುಪಿ: ಯುವತಿ ನಾಪತ್ತೆ

Update: 2023-01-18 16:51 GMT

ಉಡುಪಿ: ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಗೋಳಿಕಟ್ಟೆ ನಿವಾಸಿ ಆಶಾ(18) ಎಂಬವರು ಡಿ.17ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Similar News