ಲಂಬಾಣಿ ಸಮುದಾಯಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಪ್ರಕಾಶ್ ರಾಥೋಡ್

''ಸಿಎಂ ಬೊಮ್ಮಾಯಿ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ''

Update: 2023-01-19 12:16 GMT

ಹುಬ್ಬಳ್ಳಿ: ಲಂಬಾಣಿ ಗ್ರಾಮಗಳನ್ನು ಕಂದಾಯ ಗ್ರಾಮ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ. ಈ ಯೋಜನೆಯನ್ನು ಕಾಂಗ್ರೆಸ್ ಮಾಡಿದೆ. ಆದರೆ, ಬಿಜೆಪಿಗರು ಕಾಂಗ್ರೆಸ್ ಮಾಡಿದ ಕೆಲಸವನ್ನು ತಾವು ಮಾಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ ರಾಥೋಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನಗರದ ಗುರುವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 'ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಲಂಬಾಣಿ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಲ್ಲದೆ, ಪರಿಶಿಷ್ಟ ಜಾತಿಗೆ ವಿಶೇಷ ಕೊಡುಗೆ ನೀಡಿರುವುದು ನಿಜಕ್ಕೂ ಕಾಂಗ್ರೆಸ್ ಪಕ್ಷದ ಕೀರ್ತಿಯನ್ನು ಹೆಚ್ಚಿಸುತ್ತದೆ' ಎಂದರು.

'ಸಿದ್ದರಾಮಯ್ಯನವರು ಮುಖ್ಯಮಂತ್ರಿ ಇದ್ದಾಗ ಸರ್ಕಾರದ ಪರವಾಗಿ ಸೇವಾಲಾಲ ಜಯಂತಿ ಮಾಡುವಂತಹ ವ್ಯವಸ್ಥೆ ಜಾರಿಗೊಳಿಸಿರುವುದು ನಿಜಕ್ಕೂ ಶ್ಲಾಘನೀಯ. ಆದರೆ, ಬಿಜೆಪಿ ಮಾತ್ರ ಯಾವುದೇ ಕೊಡುಗೆ ನೀಡದೇ ಬಿಟ್ಟಿ ಪ್ರಚಾರ ಪಡೆಯುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

Similar News