ಮಾಲೂರು: ಕೆರೆಯಲ್ಲಿ ತಾಯಿ, ಇಬ್ಬರು ಹೆಣ್ಣು ಮಕ್ಕಳ ಮೃತದೇಹಗಳು ಪತ್ತೆ

Update: 2023-01-19 12:54 GMT

ಮಾಲೂರು (ಕೋಲಾರ): ಅಪರಿಚಿತ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿರುವುದು ಕೋಲಾರ ಜಿಲ್ಲೆಯ ಮಾಲೂರಿನ ಹೊರ ವಲಯದಲ್ಲಿ ವರದಿಯಾಗಿದೆ.

ಕೆರೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಮೃತ ದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದಿದ್ದಾರೆನ್ನಲಾಗಿದೆ.  

ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಳೆದ 3-4 ದಿನಗಳ ಹಿಂದೆ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ. ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲದ ಕಾರಣ ಮೃತದೇಹಗಳನ್ನು ಮಾಲೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. 

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Similar News