ಹೊಟ್ಟೆ ನೋವು ತಾಳದೆ ವ್ಯಕ್ತಿ ಆತ್ಮಹತ್ಯೆ

Update: 2023-01-19 13:30 GMT

ಮಂಡ್ಯ, ಜ.19: ಹೊಟ್ಟೆ ನೋವು ತಾಳಲಾರದೆ ವ್ಯಕ್ತಿಯೊಬ್ಬರು ಮದ್ಯದ ಜತೆ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹನುಮಂತರಾವ್ ಅವರ ಪುತ್ರ ಕುಮಾರ್(46) ಆತ್ಮಹತ್ಯೆ ಮಾಡಿಕೊಂಡವರು. ಇವರು ಹಲವು ತಿಂಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ವಿಷಯ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡ ಕುಮಾರ್ ಅವರನ್ನು ಕೂಡಲೇ ಸಮೀಪದ ಕೆ.ಎಂ.ದೊಡ್ಡಿ ಗ್ರಾಮದ ಸರಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿವೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News