ಕನ್ನಡದ ಯುವ ನಟ ಧನುಷ್‌ ನಿಧನ

Update: 2023-01-19 14:53 GMT

ಬೆಂಗಳೂರು: ಕನ್ನಡದ ಯುವ ನಟ ಧನುಷ್‌(40) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಝ್  ಸೇರಿದಂತೆ ಹಲವು ಸಿನೆಮಾಗಳಲ್ಲಿ ಧನುಷ್‌ ಅಭಿನಯಿಸಿದ್ದರು. 

ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಧನುಷ್,  ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ  ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದ  ಶ್ರೀಮುತ್ತುರಾಜ್  ಸಿನೆಮಾಗಾಗಿ ತಮ್ಮ ಹೆಸರನ್ನು ಧನುಷ್ ಎಂದು ಬದಲಾಯಿಸಿಕೊಂಡಿದ್ದರು ಎನ್ನಲಾಗಿದೆ. ಇಂದು (ಗುರುವಾರ) ರಾತ್ರಿ ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

Similar News