ರಾಮಸೇತುವನ್ನು ‘ರಾಷ್ಟ್ರೀಯ ಸ್ಮಾರಕ’ವಾಗಿ ಘೋಷಿಸುವ ಕುರಿತು ಶೀಘ್ರ ನಿರ್ಧಾರ: ಸುಪ್ರೀಂಗೆ ತಿಳಿಸಿದ ಕೇಂದ್ರ

Update: 2023-01-19 15:52 GMT

ಹೈದರಾಬಾದ್, ಜ. 19: ರಾಮಸೇತುವನ್ನು ‘ರಾಷ್ಟ್ರೀಯ ಸ್ಮಾರಕ’ವಾಗಿ ಘೋಷಿಸುವ ಪ್ರಶ್ನೆ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ (Supreme court) ಗುರುವಾರ ದಾಖಲಿಸಿಕೊಂಡಿದೆ. ರಾಜ್ಯ ಸಭೆಯ ಮಾಜಿ ಸದಸ್ಯ ಸುಬ್ರಹ್ಮಣೀಯನ್ ಸ್ವಾಮಿ(Subramanian Swamy) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ(D.Y. Chandrachud) ಹಾಗೂ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಿತು.

ಅವರು (ಸುಬ್ರಹ್ಮಣೀಯಂ ಸ್ವಾಮಿ) ಬಯಸಿದರೆ ಈ ವಿಷಯಕ್ಕೆ ಸಂಬಂಧಿಸಿದ ಹೆಚ್ಚುವರಿ ಮಾಹಿತಿಗಳನ್ನು ಸಾಂಸ್ಕೃತಿಕ ಸಚಿವಾಲಯಕ್ಕೆ ಸಲ್ಲಿಸಬಹುದು ಎಂದು ಅದು ಹೇಳಿದೆ. ಈ ಪ್ರಕ್ರಿಯೆ ಸಂಸ್ಕೃತಿ ಸಚಿವಾಲಯದಲ್ಲಿ ನಡೆಯುತ್ತಿದೆ. ಅವರು (ಸ್ವಾಮಿ) ಹೆಚ್ಚುವರಿ ಮಾಹಿತಿಯನ್ನು ನೀಡಿದರೆ ನಾವು ಕೂಡಲೇ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಕೇಂದ್ರ ಸರಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೇಳಿದರು.

ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ಸೂಚಿಸಿತು. ಈ ನಿರ್ಧಾರದಿಂದ ತೃಪ್ತಿಯಾಗದಿದ್ದರೆ, ಮತ್ತೆ ಇಲ್ಲಿಗೆ ಬರಬಹುದು ಎಂದು ದೂರುದಾರರಿಗೆ ತಿಳಿಸಿತು ಹಾಗೂ ಈ ವಿಷಯಕ್ಕೆ ಸಂಬಂಧಿಸಿದ ಮಧ್ಯಂತರ ಅರ್ಜಿಯನ್ನು ಇತ್ಯರ್ಥಗೊಳಿಸಿತು.

Similar News