ಮಂಗಳೂರು ಮಾದಕ ದ್ರವ್ಯ ಜಾಲ ಪ್ರಕರಣ: ಇಬ್ಬರು ವೈದ್ಯರ ವಿರುದ್ಧ ಶಿಸ್ತು ಕ್ರಮ; 7 ವಿದ್ಯಾರ್ಥಿಗಳ ಅಮಾನತು
Update: 2023-01-20 12:03 IST
ಮಂಗಳೂರು, ಜ.20: ಮಾದಕ ದ್ರವ್ಯ ಜಾಲ ಪ್ರಕರಣಗಳಲ್ಲಿ ಸಿಲುಕಿರುವ ಇಬ್ಬರು ವೈದ್ಯರ ವಿರುದ್ಧ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ಜರುಗಿಸಿದ್ದರೆ, 7 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣವನ್ನು ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಗಂಭೀರವಾಗಿ ಪರಿಗಣಿಸಿದೆ. ಆಡಳಿತ ಮಂಡಳಿಯ ಮುಖ್ಯಸ್ಥರು ಇಂದು ತನ್ನ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ. ಅಲ್ಲದೆ ಆರೋಪಿ ವೈದ್ಯರು, ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.