ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ

Update: 2023-01-20 08:32 GMT

ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ  ಆರೋಪಗಳನ್ನು ಎದುರಿಸುತ್ತಿರುವ ಕುಸ್ತಿ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ಸಂಸದ  ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh)  ತನ್ನ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, "ರಾಜೀನಾಮೆ ನೀಡುವ ಪ್ರಶ್ನೆಯೇ  ಇಲ್ಲ" ಎಂದು ಹೇಳಿದರು.

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಪ್ರಧಾನಿ ಕಾರ್ಯಾಲಯ ಹಾಗೂ  ಗೃಹ ಸಚಿವರೊಂದಿಗೆ ಮಾತನಾಡಿಲ್ಲ ಎಂದು ಸಿಂಗ್ ಹೇಳಿದರು,

ಸಿಂಗ್ ಅವರು ಇಂದು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ನಾಲ್ಕು ಗಂಟೆಗಳ ಕಾಲ ನಡೆದ ತಡರಾತ್ರಿ ಸಭೆಯಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿಯಾದ ನಂತರ ಸಿಂಗ್ ಈ ಹೇಳಿಕೆ ನೀಡಿದ್ದಾರೆ.  ರಾತ್ರಿ 10 ಗಂಟೆಗೆ ಆರಂಭವಾದ ಸಭೆ ಮುಂಜಾನೆ 2 ಗಂಟೆಗೆ ಮುಕ್ತಾಯವಾಗಿದ್ದು, ಸಭೆ ಫಲಪ್ರದವಾಗಿಲ್ಲ ಎಂದು ತಿಳಿದುಬಂದಿದೆ.

ಸಚಿವಾಲಯವು ಕುಸ್ತಿ ಫೆಡರೇಶನ್‌ನಿಂದ ಪ್ರತಿಕ್ರಿಯೆಯನ್ನು ಕೋರಿರುವುದರಿಂದ ಕಾಯುವಂತೆ ಸಚಿವರು ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಕುಸ್ತಿಪಟುಗಳ ಫೆಡರೇಶನ್ ತನ್ನ ಉತ್ತರವನ್ನು ಸಲ್ಲಿಸಲಿದೆ.

Similar News