ತಿ.ನರಸೀಪುರ: ಚಿರತೆ ದಾಳಿಗೆ ವೃದ್ಧೆ ಬಲಿ

Update: 2023-01-20 16:17 GMT

ಮೈಸೂರು,ಜ.20: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬ 60 ವರ್ಷದ ಮಹಿಳೆ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ವರದಿಯಾಗಿದೆ.

ಸೌದೆ ತರಲು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ಚಿರತೆ ದಾಳಿ ಮಾಡಿದೆ. ನಂತರ ಆಕೆಯನ್ನು ಎಳೆದುಕೊಂಡು ಹೋಗುತ್ತಿದ್ದುದ್ದನ್ನು ಕಂಡ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಸಿದ್ದಮ್ಮರನ್ನು ಅಲ್ಲೇ ಬಿಟ್ಟು ಚಿರತೆ ಓಡಿ ಹೋಗಿದೆ ಎಂದು ಹೇಳಲಾಗಿದೆ. 

ಘಟನಾ ಸ್ಥಳದಲ್ಲಿ ಮೃತ ಸಿದ್ದಮ್ಮ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆದು ಒಂದು ಗಂಟೆಯಾದರೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಆಗಮಿಸದ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಸಿದ್ದಮ್ಮ ಅವರ ಮೃತದೇಹ ಕಳುಹಿಸಲಾಗಿದೆ.

Similar News