×
Ad

ಯತ್ನಾಳ್ ಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ: ನಳಿನ್ ಕುಮಾರ್ ಕಟೀಲ್

Update: 2023-01-21 18:28 IST

ಬೆಂಗಳೂರು, ಜ. 21: ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ನೀಡಿದ್ದು, ಶಿಸ್ತು ಸಮಿತಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. 

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪಕ್ಷದಲ್ಲಿ ಅಶಿಸ್ತಿನ ಕಾರಣಕ್ಕೆ ಯತ್ನಾಳ್‍ಗೆ ನೋಟಿಸ್ ನೀಡಿದ್ದು, ಶಿಸ್ತು ಸಮಿತಿ ಮುಂದೆ ಖುದ್ದು ಹಾಜರಾಗಲು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಅಶಿಸ್ತಿನ ವರ್ತನೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಯತ್ನಾಳ್ ಪಕ್ಷದ ವಿರುದ್ಧ ಹಾಗೂ ಸಚಿವರ ವಿರುದ್ಧ ಸಾರ್ವಜನಿಕವಾಗಿ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಕಾರಣ ಕೇಳಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಆದರೆ, ಅವರ ಯಾವುದೇ ನೋಟಿಸ್ ತನಗೆ ಬಂದಿಲ್ಲ ಎಂದು ಹೇಳಿದ್ದು, ನೋಟಿಸ್ ನೀಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಭೆ ಮಾತ್ರ ಶಿಸ್ತಿನಿಂದ ನಡೆಯುತ್ತದೆ: ನಳಿನ್ ಕುಮಾರ್ ಕಟೀಲ್

Full View

Similar News