ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ನಾಯಕ ಕುಂತಲ್ ಘೋಷ್ ಬಂಧನ

Update: 2023-01-21 13:22 GMT

ಕೋಲ್ಕತಾ, ಜ. 21: ಪಶ್ಚಿಮಬಂಗಾಳದಲ್ಲಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ನ ಯುವ ನಾಯಕ ಕುಂತಲ್ ಘೋಷ್(Kuntal Ghosh) ನನ್ನು ಜಾರಿ ನಿರ್ದೇಶನಾಲಯ ಶನಿವಾರ ಬಂಧಿಸಿದ. ಚಿನಾರ್ ಪಾರ್ಕ್ ಅಪಾರ್ಟ್ಮೆಂಟ್ ಸಮುಚ್ಛಯದಲ್ಲಿ ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಘೋಷ್ ಅವರನ್ನು ಶನಿವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. ಅನಂತರ ಅವರನ್ನು ಬಂಧಿಸಿದರು ಎಂದು ಅನಾಮಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‌

ಪ್ರಕರಣದ ತನಿಖಾಧಿಕಾರಿಗಳೊಂದಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಘೋಷ್ ಅವರನ್ನು ಬಂಧಿಸಲಾಗಿದೆ. ಶೋಧ ಕಾರ್ಯಾಚರಣೆ ಸಂದರ್ಭ ಅವರ ನಿವಾಸದಿಂದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ನಡುವೆ ಇದೇ ಪ್ರಕರಣದ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಘೋಷ್ ಅವರಿಗೆ ಸಮನ್ಸ್ ನೀಡಿದ್ದಾರೆ. 

2019ರಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಬದಲಿಗೆ ಹಣ ಪಡೆದು ಬೇರೆ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಪಾರ್ಥ ಚಟರ್ಜಿ ಸೇರಿದಂತೆ ರಾಜ್ಯ ಶಿಕ್ಷಣ ಇಲಾಖೆಯ 12 ಅಧಿಕಾರಿಗಳನ್ನು ಬಂಧಿಸಲಾಗಿದೆ

Similar News