ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ: ಬಿ.ಎಸ್. ಯಡಿಯೂರಪ್ಪ
''ಪಕ್ಷದಲ್ಲಿ ನನ್ನನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ''
Update: 2023-01-21 18:55 IST
ಕಲಬುರಗಿ, ಜ.21: ಪಕ್ಷದಲ್ಲಿ ನನ್ನನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಗೌರವಯುತ ಸ್ಥಾನ ನೀಡಿದ್ದು, ಇದಕ್ಕೆ ನಾನು ಪಕ್ಷಕ್ಕೆ ಅಭಾರಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ಕಲಬುರಗಿ ವಿಮಾನ ನಿಲ್ದಾಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ. ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಇನ್ನೂ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದರು.
ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರು ತಾವೆ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಹೇಳಿಕೊಂಡು ತಿರುಕನ ಕನಸು ಕಾಣುತ್ತಿದ್ದಾರೆ. ಅವರ ಸರಕಾರ ಇದ್ದಾಗ ಏನಾದರೂ ಒಳ್ಳೆಯ ಕೆಲಸ ಮಾಡಿದ್ದರೆ ಅಧಿಕಾರವನ್ನು ಯಾಕೆ ಕಳೆದುಕೊಂಡರು ಎಂದು ಯಡಿಯೂರಪ್ಪ ಪ್ರಶ್ನಿಸಿದರು.