ಹೈಕೋರ್ಟ್‌ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

Update: 2023-01-21 16:35 GMT

ಬೆಂಗಳೂರು, ಜ.21: ಕರ್ನಾಟಕ ಹೈಕೋರ್ಟ್‌ಗೆ ಇಬ್ಬರು ಹೆಚ್ಚುವರಿ ನ್ಯಾಯಾಧೀಶರನ್ನು ನೇಮಕ ಮಾಡಲಾಗಿದೆ. 

ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಾಧೀಶರಾಗಿ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ ಅವರನ್ನು ನೇಮಿಸಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. 

ಎರಡು ವರ್ಷ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅವರು ಕಾರ್ಯನಿರ್ವಹಿಸಲಿದ್ದು, ಬಳಿಕ ಖಾಯಂ ಆಗಿ ನೇಮಕ ಮಾಡಲಾಗುತ್ತದೆ.

Similar News