ಎಲ್ಲರೂ ವಿಧಾನಸಭೆ ಚುನಾವಣೆಗೆ ನಿಲ್ಲುವಂತೆ ಕೇಳುತ್ತಿದ್ದಾರೆ: ಸಂಸದೆ ಸುಮಲತಾ

Update: 2023-01-21 18:05 GMT

ಮೈಸೂರು: 'ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ‌ಕ್ಕೆ ಸಂಬಂಧಿಸಿ ನಾನು ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಎಲ್ಲರೂ ಚುನಾವಣೆಗೆ ನಿಲ್ಲುವಂತೆ ಕೇಳುತ್ತಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ' ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬೆಂಬಲಿಗರು ಸಭೆ ನಡೆಸಿರುವ ಬಗ್ಗೆ ಗೊತ್ತಿಲ್ಲ.ಅಂಬರೀಷ್ ಬೆಂಬಲಿಗರು ಸಭೆ ನಡೆಸಿದ್ದಾರೆ. ಪುತ್ರ (ಅಭಿಷೇಕ್) ಚುನಾವಣೆಗೆ ಸ್ಪರ್ಧೆ ಮಾಡುವುದು ಅವನಿಗೆ ಬಿಟ್ಟದ್ದು' ಎಂದು ತಿಳಿಸಿದರು. 

'ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ. ಹಣೆಯ ಬರಹ ಯಾವ ರೀತಿ ಆಗುತ್ತೋ ಆ ರೀತಿ ಆಗುತ್ತದೆ. ಅಂಬರೀಷ್ ಅವರ ಕುಟುಂಬ ಮೈಸೂರಿನಲ್ಲಿದ್ದಾರೆ. ಮೈಸೂರು- ಬೆಂಗಳೂರಿಗೆ ಹೈವೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ನಾನೇ ಪತ್ರ ಬರೆದಿದ್ದೇನೆ' ಎಂದು ಹೇಳಿದ್ದಾರೆ.

Similar News